ಅಹಮದಾಬಾದ್, 12 ಜೂನ್ (ಹಿ.ಸ.) :
ಆ್ಯಂಕರ್ : 242 ಪ್ರಯಾಣಿಕರಿದ್ದ ವಿಮಾನ ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ.
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು ಎಂದು ಅಧಿಕೃತ ಮೂಲಗಳ ಮಾಹಿತಿ ತಿಳಿಸಿದೆ.
ವಿಮಾನ ಪತನದ ನಂತರ ಭಾರಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa