ರಾಯಚೂರು, 12 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣಾಧಿಕಾರಿಗಳ ಕಾರ್ಯಾಲಯ, ಎನ್.ಸಿ.ಸಿ,ಎನ್, ಎಸ್.ಎಸ್, ರೆಡ್ ರಿಬ್ಬನ್ ಕ್ಲಬ್, ರಕ್ತ ನಿಧಿ ಕೇಂದ್ರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಜೂನ್ 14 ರಂದು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳ್ಳಿಸಬೇಕೆಂದು ಕೋರಲಾಗಿದೆ.
ಬೆಳಿಗ್ಗೆ 09 ಕ್ಕೆ ಜಿಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಜಾಥಕ್ಕೆ ಗಣ್ಯರಿಂದ ಹಸಿರು ಬಾವುಟದೊಂದಿಗೆ ಚಾಲನೆ ನೀಡಲಾಗುವುದು. ಈ ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ದಿಂದ ತೀನ್ಕಂದೀಲ್, ಬಟ್ಟೆ ಬಜಾರ್, ಮಹಾವೀರ ಸರ್ಕಲ್, ಜೈನ ಮಂದಿರ ಮಾರ್ಗವಾಗಿ ಜನರಲ್ಲಿ ರಕ್ತದಾನದ ಕುರಿತು ಅರಿವು ಮೂಡಿಸುತ್ತಾ ಜಿಲಾ ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಬಂದು ಸೇರಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್