ಬಳ್ಳಾರಿ, 12 ಜೂನ್ (ಹಿ.ಸ.) :
ಆ್ಯಂಕರ್ : ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಜೂ.24 ರಂದು ಬೆಳಿಗ್ಗೆ 09 ಗಂಟೆಗೆ ಇದೇ ಶಾಲೆಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಅರ್ಹ ಅನುಭವವುಳ್ಳ 21 ರಿಂದ 60 ವರ್ಷ ವಯೋಮಿತಿಯೊಳಗಿನ ನವೋದಯ, ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
*ಹುದ್ದೆ:*
ಜೀವಶಾಸ್ತ್ರ ಶಿಕ್ಷಕ-01, ಇಂಗ್ಲೀಷ್ ಶಿಕ್ಷಕ-01, ದೈಹಿಕ ಶಿಕ್ಷಕ(ಮಹಿಳೆ)-02 ಮತ್ತು ವಸತಿ ನಿಲಯಪಾಲಕ-01.
ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ನಿಗದಿಪಡಿಸಿದ ದಿನದಂದು ಸಂದರ್ಶನಕ್ಕೆ ಹಾಜರಾಗಬಹುದು. ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ ಎಂದು ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್