ಪಠಾಣಕೋಟ್, 13 ಜೂನ್ (ಹಿ.ಸ.) :
ಆ್ಯಂಕರ್ : ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಭಾರತೀಯ ವಾಯುಪಡೆಯ ಅಪಾಚೆ ಹೆಲಿಕಾಪ್ಟರ್ ಶುಕ್ರವಾರ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ.
ಹಲೇಡಾ ಗ್ರಾಮದ ಬಳಿ ಘಟನೆ ನಡೆದಿದ್ದು, ಪೈಲಟ್ ಹಾಗೂ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಸೇನೆ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಸುತ್ತುವರೆದಿದ್ದಾರೆ. ತಾಂತ್ರಿಕ ದೋಷ ಸರಿಪಡಿಸುವ ಕಾರ್ಯ ನಡೆಯುತ್ತಿದೆ. ವಾಯುಪಡೆಯಿಂದ ಅಧಿಕೃತ ಪ್ರಕಟಣೆ ಇನ್ನೂ ಬಂದಿಲ್ಲ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa