ರಾಯಚೂರು, 13 ಜೂನ್ (ಹಿ.ಸ.) :
ಆ್ಯಂಕರ್ : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ದಿಂದ 2025ನೇ ಸಾಲಿನ ರಾಷ್ಟೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕøತಿ ಮತ್ತು ನೂತನ ಅವಿಕ್ಷಾರಗಳನ್ನ ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳು, ಇಲಾಖೆಯ ವೆಬ್‍ಸೈಟ್ ವಿಳಾಸ: hಣಣಠಿ://ಚಿತಿಚಿಡಿಜs.gov.iಟಿ ನಲ್ಲಿ ಜುಲೈ 31ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಚೇರಿಗೆ ಕಚೇರಿಯ ಸಮಯದಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್