ಕಾರವಾರ, 13 ಜೂನ್ (ಹಿ.ಸ.) :
ಆ್ಯಂಕರ್ : ಕಾರವಾರ ಜಿಲ್ಲೆಯ ಸುರಿಯುತ್ತಿರುವ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಕಾರವಾರದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡು, ನೂರಾರು ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa