ನವದೆಹಲಿ, 13 ಜೂನ್ (ಹಿ.ಸ.) :
ಆ್ಯಂಕರ್ : ದೇಶದಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿದ್ದು, ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 7,131 ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಚೇತರಿಕೆಯ ದರ ಉತ್ತಮವಾಗಿದ್ದು, ಈ ವರ್ಷ ಇದುವರೆಗೆ 10,976ಕ್ಕೂ ಹೆಚ್ಚು ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಕೇರಳ ಮತ್ತು ದೆಹಲಿ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದರೂ, ಕೇರಳದಲ್ಲಿ ಇನ್ನೂ ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಇಂದು 2,055 ಪ್ರಕರಣಗಳು ವರದಿಯಾಗಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa