ಬೆಂಗಳೂರು, 13 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಪ್ರಬಲವಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ರಾಜ್ಯದ ಹಲವೆಡೆ ಅವಾಂತರ ಸೃಷ್ಟಿಸಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹುಬ್ಬಳ್ಳಿಯಲ್ಲಿ ಓರ್ವ ವ್ಯಕ್ತಿ ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೊಗಿದ್ದಾನೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಮನೆ, ರಸ್ತೆಗಳು ಜಲಾವೃತವಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa