ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಗೃಹ ಸಚಿವರ ಭೇಟಿ
ಮಂಗಳೂರು, 13 ಜೂನ್ (ಹಿ.ಸ.) : ಆ್ಯಂಕರ್ : ಮಂಗಳೂರು ನಗರದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ‌ ಕಾರಾಗೃಹದ ಕಾಮಗಾರಿಯ ಸ್ಥಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ, ಪ್ರಗತಿ ಪರಿಶೀಲನೆ‌ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ, ಭದ
Visit


ಮಂಗಳೂರು, 13 ಜೂನ್ (ಹಿ.ಸ.) :

ಆ್ಯಂಕರ್ : ಮಂಗಳೂರು ನಗರದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ‌ ಕಾರಾಗೃಹದ ಕಾಮಗಾರಿಯ ಸ್ಥಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ, ಪ್ರಗತಿ ಪರಿಶೀಲನೆ‌ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ, ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವಾನ್ ಡಿ.ಸೋಜಾ, ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಬಂಧಿಖಾನೆ ಇಲಾಖೆಯ ಡಿಐಜಿ ಕೆ.ಸಿ.ದಿವ್ಯಶ್ರೀ, ಮಂಗಳೂರು ನಗರ ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande