ಬೆಂಗಳೂರು, 13 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಧ್ರ ಪ್ರದೇಶ ಸಾರಿಗೆ ಬಸ್ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ. ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ 16 ಜನ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಂಧ್ರ ಪ್ರದೇಶ ಸಾರಿಗೆ ಬಸ್ ನಲ್ಲಿದ್ದ ಕೇಶವ ರೆಡ್ಡಿ, ತುಳಸಿ, ಪ್ರಣತಿ ಹಾಗೂ ೧ ವರ್ಷದ ಮಗು ಮೃತ ದುರ್ದೈವಿಗಳಾಗಿದ್ದಾರೆ.
ಈ ಕುರಿತು ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa