ಚಿಕ್ಕಬಳ್ಳಾಪುರ, 14 ಜೂನ್ (ಹಿ.ಸ.) :
ಆ್ಯಂಕರ್ : ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ ಅಂತರ ಜಿಲ್ಲಾ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 7.40 ಲಕ್ಷ ಮೌಲ್ಯದ 18 ಬೈಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಹೌಸಿಂಗ್ ಕಾಲೋನಿಯ ನಿವಾಸಿ ಪಿ. ಕೆ. ಭಾಸ್ಕರ್(48) ಎಂದು ತಿಳಿದು ಬಂದಿದ್ದು, ವೃತ್ತಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ದೇವನಹಳ್ಳಿ, ತುಮಕೂರು, ಚಿಕ್ಕಬಳ್ಳಾಪುರದಲ್ಲಿ ಬೈಕ್ ಕಳ್ಳತನ ಮಾಡಿರುವ ಆರೋಪಗಳು ಈತನ ಮೇಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa