ಧಾರವಾಡ ಅಪರ ಜಿಲ್ಲಾಧಿಕಾರಿ ಗೀತಾ ಕಾರು ಅಪಘಾತ
ಹುಬ್ಬಳ್ಳಿ, 14 ಜೂನ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ. ಅವರ ಸರಕಾರಿ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆ ಹಾನಿ ವೀಕ್ಷಣೆಗೆಂದು ಅವರು ಸಚಿವ ಸಂತೋಷ ಲಾಡ್ ಅವರೊಂದಿಗೆ ತಮ್ಮ ಸರ್ಕಾರಿ ಕಾರಿನಲ್ಲಿ ತೆರಳಿದ್ದ
Accident


ಹುಬ್ಬಳ್ಳಿ, 14 ಜೂನ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ. ಅವರ ಸರಕಾರಿ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಳೆ ಹಾನಿ ವೀಕ್ಷಣೆಗೆಂದು ಅವರು ಸಚಿವ ಸಂತೋಷ ಲಾಡ್ ಅವರೊಂದಿಗೆ ತಮ್ಮ ಸರ್ಕಾರಿ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಹುಬ್ಬಳ್ಳಿ ತಾಲೂಕಿನ ಹೆಬಸೂರು ಗ್ರಾಮದ ಹತ್ತಿರ ಗೀತಾ ಅವರ ಸರ್ಕಾರಿ ಕಾರಿಗೆ ಸಿಲಿಂಡ‌ರ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಡಿಕ್ಕಿ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಅಪಘಾತವಾಗುತ್ತಿದ್ದಂತೆಯೇ ಕ್ಯಾಂಟರ್ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande