ನವಲಗುಂದ, 14 ಜೂನ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ಪ್ರವಾಹ ಪಿಡೀತ ಹಾಗೂ ಮಳೆ ಹಾನಿ ಪ್ರದೇಶ ವೀಕ್ಷಣೆ ಪ್ರವಾಸ ಕೈಗೊಂಡಿದ್ದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರಡ್ಡಿ ದ್ವಿಚಕ್ರ ವಾಹನದಲ್ಲಿ ತಾಲೂಕಿನ ಆರೆಕುರಹಟ್ಟಿ ಗ್ರಾಮದಲ್ಲಿ ಬೆಣ್ಣೆ ಹಳ್ಳದಿಂದ ಬಾಧಿತವಾಗುವ ಎಸ್.ಸಿ. ಕಾಲೋನಿ, ಲಕ್ಷ್ಮಿನಗರ ಪ್ರದೇಶಗಳನ್ನು ವೀಕ್ಷಣೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರ ಮಳೆಹಾನಿ ಪ್ರದೇಶ ವಿಕ್ಷಣೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ತಹಶಿಲ್ದಾರ ಸುದೀರ ಸಾಹುಕಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa