ಜುಲೈ ತಿಂಗಳ ಕೊನೆಯಲ್ಲಿ ದೇಶದ ಮೊದಲ ಕ್ವಾಂಟಮ್‌ ಸಮ್ಮೇಳನ
ಬೆಂಗಳೂರು, 14 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯವನ್ನು ಕ್ವಾಂಟಮ್‌ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ಕೇಂದ್ರವನ್ನಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಜುಲೈ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ಕ್ವಾಂಟಮ್ ಸಮ್ಮೇಳನ ನಡೆಯಲಿದೆ. ಕ್ವಾಂಟಮ್ ತಂತ್ರಜ್ಞಾನದಲ್ಲಿನ ಹೊಸ ಆವಿಷ್ಕಾರಗಳು ನಮ್ಮ ದೈ
ಜುಲೈ ತಿಂಗಳ ಕೊನೆಯಲ್ಲಿ ದೇಶದ ಮೊದಲ ಕ್ವಾಂಟಮ್‌ ಸಮ್ಮೇಳನ


ಬೆಂಗಳೂರು, 14 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯವನ್ನು ಕ್ವಾಂಟಮ್‌ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ಕೇಂದ್ರವನ್ನಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಜುಲೈ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ಕ್ವಾಂಟಮ್ ಸಮ್ಮೇಳನ ನಡೆಯಲಿದೆ.

ಕ್ವಾಂಟಮ್ ತಂತ್ರಜ್ಞಾನದಲ್ಲಿನ ಹೊಸ ಆವಿಷ್ಕಾರಗಳು ನಮ್ಮ ದೈನಂದಿನ ಜೀವನದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿವೆ. ಕ್ವಾಂಟಮ್ ತಂತ್ರಜ್ಞಾನವು ಅನೇಕ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆ ತರುವ ಸಾಮರ್ಥ್ಯವನ್ನು ಹೊಂದಿದೆ.

ಕ್ವಾಂಟಮ್ ತಂತ್ರಜ್ಞಾನವು, ತಂತ್ರಜ್ಞಾನದಲ್ಲಿ ಸಾಧ್ಯವಿರುವ ಹೊಸ ಸಾಧ್ಯತೆಗಳನ್ನ ತಲುಪಲು ಸಹಾಯಕವಾಗಲಿದೆ, ಹೊಸ ಆವಿಷ್ಕಾರ ಹಾಗೂ ಅಭಿವೃದ್ದಿಗೂ ಕಾರಣವಾಗಲಿದೆ. ಈ ಪ್ರಮುಖ ಕ್ಷೇತ್ರದಲ್ಲಿ ನಮ್ಮ ನಾವೀನ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಈಗಾಗಲೇ ಐಐಎಸ್ಸಿ ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ ಕ್ವಾಂಟಮ್ ರಿಸರ್ಚ್ ಪಾರ್ಕ್ ಗೆ ಅಗತ್ಯ ಬೆಂಬಲ ನೀಡುತ್ತಿದೆ. ಕ್ವಾಂಟಮ್‌ ತಂತ್ರಜ್ಞಾನದ ಮೂಲಕ ಪ್ರಸ್ತುತ ಪಡಿಸಲಾಗಿರುವ ಅಗಾಧ ಅವಕಾಶಗಳನ್ನ ಉತ್ತಮವಾಗಿ ಬಳಸಿಕೊಳ್ಳಲು ಉತ್ತಮ ಅವಕಾಶವಾಗಿದೆ

ದೇಶದ ಮೊದಲ ಕ್ವಾಂಟಮ್‌ ಸಮ್ಮೇಳನ ಇದಾಗಿದ್ದು ಉತ್ತಮ ರೀತಿಯಲ್ಲಿ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಸೂಚನೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande