ಜೂನ್ ೧೯ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ
ಚಿಕ್ಕಬಳ್ಳಾಪುರ, 15 ಜೂನ್ (ಹಿ.ಸ.) : ಆ್ಯಂಕರ್ : ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ನಂದಿಬೆಟ್ಟದಲ್ಲಿ ಜೂನ್ 19 ರಂದು ಸಚಿವ ಸಂಪುಟದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಮತ್ತು ಜಿಲ್ಲಾಧಿಕಾರಿಗಳು ಪರ
ಜೂನ್ ೧೯ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ


ಚಿಕ್ಕಬಳ್ಳಾಪುರ, 15 ಜೂನ್ (ಹಿ.ಸ.) :

ಆ್ಯಂಕರ್ : ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ನಂದಿಬೆಟ್ಟದಲ್ಲಿ ಜೂನ್ 19 ರಂದು ಸಚಿವ ಸಂಪುಟದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಮತ್ತು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಸಭೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.

ಈ ವೇಳೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ ಸಚಿವ ಸಂಪುಟ ಸಭೆಯಿಂದ ಈ ಭಾಗದ ಜಿಲ್ಲೆಗಳಿಗೆ ಹೆಚ್ಚಿನ ಅನುದಾನ ದೊರೆಯಲಿದೆ ಹಾಗೂ ಈ ಭಾಗದ ಬೇಡಿಕೆಗಳ ಕುರಿತು ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande