ರುದ್ರಪ್ರಯಾಗ, 15 ಜೂನ್ (ಹಿ.ಸ.) :
ಆ್ಯಂಕರ್ : ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನಗೊಂಡು ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಆರ್ಯನ್ ಏವಿಯೇಷನ್ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಕೆಟ್ಟ ಹವಾಮಾನದಿಂದ ಗೌರಿಕುಂಡ್ ಅರಣ್ಯದಲ್ಲಿ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್‌ನಲ್ಲಿ ಪೈಲಟ್ ಸೇರಿ ೭ ಮಂದಿ ಪ್ರಯಾಣಿಸುತ್ತಿದ್ದ ಎಲ್ಲರು ಮೃತಪಟ್ಟಿದ್ದಾರೆ.
ಘಟನಾ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಸ್ಥಳೀಯ ಆಡಳಿತ ಮತ್ತು ಇತರ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಪ್ರತಿಕೂಲ ಹವಾಮಾನದಿಂದ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ.
ಡೆಹ್ರಾಡೂನ್ ನಿಂದ ಕೇದಾರನಾಥ ಧಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಮೃತ ಪ್ರಯಾಣಿಕರು ಮಹಾರಾಷ್ಟ್ರ ಮೂಲದವರು ಎಂದು ತಿಳಿದು ಬಂದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa