ಬೆಳಗಾವಿ, 15 ಜೂನ್ (ಹಿ.ಸ.) :
ಆ್ಯಂಕರ್ : ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸಮಳ್ಳಿ ಗ್ರಾಮದ ಬಳಿ ತಾತ್ಕಾಲಿಕ ರಸ್ತೆಯ ಸೇತುವೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದ್ದು, ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಆಗುವ ಉದ್ದೇಶದಿಂದ ಸೇತುವೆ ಕಾಮಗಾರಿ ಪಕ್ಕದಲ್ಲೆ ತಾತ್ಕಾಲಿಕವಾಗಿ ರಸ್ತೆ ನಿರ್ಮಿಸಲಾಗಿತ್ತು.
ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ . ರಸ್ತೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದ್ದು,ವಾಹನ ಸಂಚಾರ ಸ್ಥಗಿತಗೊಂಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa