ರಾಯಚೂರು, 15 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣ ಗೌಡ ಕೆ ಅವರು ಜೂನ್ 16ರಂದು ರಾಯಚೂರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 11.30ಕ್ಕೆ ಸರ್ಕಾರಿ ಶಾಲೆ ಹಾಗೂ ಹಾಸ್ಟೇಲ್ಗಳಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಬಳಿಕ ರಾಯಚೂರ ಜಿಲ್ಲೆಯಲ್ಲಿ ವಾಸ್ತವ್ಯ ಮಾಡುವರು. ಜೂನ್ 17ರಂದು ವಿಜಯನಗರ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್