ಪ್ರತಿ ನಿತ್ಯ ತಪ್ಪದೇ ಶಾಲೆಗೆ ಬರಬೇಕು : ಸಚಿವ ಎಸ್. ಮಧು ಬಂಗಾರಪ್ಪ
ಬಳ್ಳಾರಿ, 16 ಜೂನ್ (ಹಿ.ಸ.) : ಆ್ಯಂಕರ್ : ವಿದ್ಯಾರ್ಥಿಗಳು ನಿತ್ಯವೂ ಶಾಲೆಗೆ ಬಂದು ಕಲಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಕರೆ ನೀಡಿದ್ದಾರೆ. ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ,
ಪ್ರತಿ ನಿತ್ಯ ತಪ್ಪದೇ ಶಾಲೆಗೆ ಬರಬೇಕು: ಸಚಿವ ಎಸ್. ಮಧು ಬಂಗಾರಪ್ಪ


ಪ್ರತಿ ನಿತ್ಯ ತಪ್ಪದೇ ಶಾಲೆಗೆ ಬರಬೇಕು: ಸಚಿವ ಎಸ್. ಮಧು ಬಂಗಾರಪ್ಪ


ಪ್ರತಿ ನಿತ್ಯ ತಪ್ಪದೇ ಶಾಲೆಗೆ ಬರಬೇಕು: ಸಚಿವ ಎಸ್. ಮಧು ಬಂಗಾರಪ್ಪ


ಬಳ್ಳಾರಿ, 16 ಜೂನ್ (ಹಿ.ಸ.) :

ಆ್ಯಂಕರ್ : ವಿದ್ಯಾರ್ಥಿಗಳು ನಿತ್ಯವೂ ಶಾಲೆಗೆ ಬಂದು ಕಲಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ಕರೆ ನೀಡಿದ್ದಾರೆ.

ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, 7ನೆಯ ತರಗತಿಯ ಮಕ್ಕಳೊಂದಿಗೆ ಸಂವಾದ ನಡೆಸಿ, ವಿದ್ಯಾರ್ಥಿಗಳ ಜೊತೆ ಅವರು ಮಾತನಾಡಿದರು.

ಮನೆಯಲ್ಲಿ ಶಾಲೆಗೆ ಹೋಗಲು ಅಡ್ಡಿಪಡಿಸಿದರೆ, ನಾನು ತಪ್ಪದೇ ಶಾಲೆಗೆ ಹೋಗುತ್ತೇನೆ ಎಂದು ಹೇಳಬೇಕು. ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬೇಕು. ಆರೋಗ್ಯದಿಂದಿರಬೇಕು. ಶಿಕ್ಷಣ ಪಡೆದುಕೊಂಡು ಉನ್ನತ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದು ಸಚಿವರು ಆಶಿಸಿದರು.

*ಸಂವಿಧಾನ ಪೀಠಿಕೆ ಪ್ರಸ್ತುತಪಡಿಸಿದ ರಿತಿಕಾ:*

ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಯಾರೂ ಹೇಳುತ್ತೀರಾ ಎಂದು ಸಚಿವ ಎಸ್.ಮಧು ಬಂಗಾರಪ್ಪ ಅವರು ಕೇಳಿದಾಗ, ಐದನೇ ತರಗತಿ ವಿದ್ಯಾರ್ಥಿನಿ ರಿತಿಕಾ ಅವರು ಸಂವಿಧಾನ ಪೀಠಿಕೆಯನ್ನು ವಿಸ್ತಾರವಾಗಿ ವಾಚನ ಮಾಡಿದರು.

*ಮಕ್ಕಳೊಂದಿಗೆ ಊಟ ಸವಿದ ಸಚಿವರು:*

ಶಾಲೆಯ ವಿವಿಧ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಬಳಿಕ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು. ಊಟದಲ್ಲಿ ಅನ್ನ, ಸಾಂಬಾರು ಜೊತೆಗೆ ಉಪ್ಪಿನಕಾಯಿ ಮತ್ತು ಮೊಟ್ಟೆ ನೀಡಲಾಗಿತ್ತು. ಇದೇ ವೇಳೆ ಊಟದ ರುಚಿಯ ಬಗ್ಗೆ ಮಕ್ಕಳ ಅಭಿಪ್ರಾಯ ಪಡೆದುಕೊಂಡರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್ ಶಂಕರ್, ಡಿಡಿಪಿಐ ಬಿ.ಉಮಾದೇವಿ, ವಿಷಯ ಪರಿವೀಕ್ಷಕಿ ವೇದಾವತಿ, ಶಾಲೆಯ ಮುಖ್ಯಗುರುಗಳಾದ ಜಯಶ್ರೀ ಸೇರಿದಂತೆ ಬಿಇಒ, ಎಸ್‍ಡಿಎಂಸಿ ಅಧ್ಯಕ್ಷರು, ಶಾಲಾ ಶಿಕ್ಷಕರು, ಶಾಲಾ ಶಿಕ್ಷಕರು ಹಾಗೂ ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande