ಮಂಗಳೂರು, 16 ಜೂನ್ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಭಾರಿ ಮಳೆ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಇಂದು ಜಿಲ್ಲೆಯ ಐದು ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿದೆ.
ಮಂಗಳೂರು, ಉಳ್ಳಾಲ, ಮುಲ್ಕಿ, ಮೂಡಬಿದ್ರೆ ಹಾಗೂ ಬಂಟ್ವಾಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲೆಯಲ್ಲಿ ಮಳೆ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಕೆಂಪು ಎಚ್ಚರಿಕೆ ಘೋಷಿಸಲಾಗಿದ್ದು. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಕ್ರಮ ಕೈಗೊಂಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa