ಕಲಬುರಗಿ, 16 ಜೂನ್ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆ ಕಬ್ಬು ಬೆಳೆಗಾರರ ಜ್ವಲಂತ ಸಮಸ್ಯೆಗಳನ್ನ ಬಗೆಹರಿಸಲು ಆಗ್ರಹಿಸಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದು ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ ಅವೈಜ್ಞಾನಿಕ ಬೆಲೆ ನಿಗದಿ ಮಾಡಲಾಗಿದ್ದು, ತೂಕದ ಯಂತ್ರದಲ್ಲಿ ಸಹ ಮೋಸ ಮಾಡಲಾಗ್ತಿದೆಯೆಂದು ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ.. ಇನ್ನೂ ಸರ್ಕಾರದ ವತಿಯಿಂದಲೇ ಸಕ್ಕರೆ ಕಾರ್ಖಾನೆ ಬಳಿ ತೂಕದ ಯಂತ್ರ ಅಳವಡಿಸಬೇಕು.. ಕಬ್ಬಿನಿಂದ ಬರೋ ಉತ್ಪನ್ನಗಳಲ್ಲಿ ಬರೋ ಲಾಭ ರೈತರಿಗೆ ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಶಾಸಕ ಬಿ.ಆರ್. ಪಾಟೀಲ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಜಗದೀಶ್ ಪಾಟೀಲ್, ಧರ್ಮರಾಜ್ ಸಾಹು ಸೇರಿದಂತೆ ಅನೇಕರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Samarth biral