ಹಾಸನ, 16 ಜೂನ್ (ಹಿ.ಸ.) :
ಆ್ಯಂಕರ್ : ಹಾಸನ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಸಾಲಗಾಮೆ ಹೋಬಳಿ ವ್ಯಾಪ್ತಿಯಲ್ಲಿ ಮುಸುಕಿನ ಜೋಳ ಹಾನಿಯಾಗಿರುವ ಕೃಷಿ ಪ್ರದೇಶಗಳಿಗೆ ಇಂದು ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಾಸನ ತಾಲೂಕಿನಲ್ಲಿ ಒಟ್ಟು 12,200 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬಿತ್ತನೆಯಾಗಿದ್ದು, ಸಾಲಾಗಾಮೆ - 425 ಹೆಕ್ಟೇರ್ ಹಾಗೂ ಕಸಬಾ - 1500 ಹೆಕ್ಟೇರ್ ಸೇರಿ ಒಟ್ಟು 1925 ಹೆಕ್ಟೇರ್ ಪ್ರದೇಶಕ್ಕೆ ರೋಗ ಹರಡಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬಳಿಕ ಬೆಳೆ ಹಾನಿ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕೊಡಿಸುವ ಬಗ್ಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ ಅವರು, ಕ್ಷೇತ್ರದ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಬಗ್ಗೆ ಮಾಹಿತಿ ಪಡೆದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa