ಧಾರವಾಡ, 16 ಜೂನ್ (ಹಿ.ಸ.) :
ಆ್ಯಂಕರ್ : ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು ಮಾಡಿದೆ. ಕರ್ನಾಟಕದ ಸುಮಾರು 9 ವಿದ್ಯಾರ್ಥಿಗಳು ಇರಾನ್ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದು, ಸದರಿ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಆತಂಕಗೊಂಡಿರುತ್ತಾರೆ. ಅವರ ಪೋಷಕರು ಅನಿವಾಸಿ ಭಾರತೀಯ ಸಮಿತಿ, ಬೆಂಗಳೂರು ಕಚೇರಿಗೆ ದೂರವಾಣಿ ಮುಖೇನ ತಿಳಿಸಿರುತ್ತಾರೆ. ಇದಕ್ಕೆ ಸ್ಪಂದಿಸಿದ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಸದರಿ ವಿದ್ಯಾರ್ಥಿಗಳನ್ನು ಕೂಡಲೇ ಕರೆತರಲು ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ದೂರವಾಣಿ ಮುಖೇನ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಖುದ್ದು ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa