ಮಕ್ಕಳ ಹಕ್ಕುಗಳ ಪ್ರಗತಿ ಪರಿಶೀಲನಾ ಸಭೆ
ಬಳ್ಳಾರಿ, 16 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಜೂನ್ 18ರ ಬುಧವಾರ ಬಳ್ಳಾರಿಗೆ ಭೇಟಿ ನೀಡಲಿದ್ದು, ಆರ್.ಟಿ.ಇ 2009, ಪೋಕ್ಸೋ 2012, ಬಾಲನ್ಯಾಯ ಕಾಯ್ದೆ-2015 ರ ಅನುಷ್ಠಾನ ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮ ಮತ್ತು ಯೋಜ
ಮಕ್ಕಳ ಹಕ್ಕುಗಳ ಪ್ರಗತಿ ಪರಿಶೀಲನಾ ಸಭೆ


ಬಳ್ಳಾರಿ, 16 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಜೂನ್ 18ರ ಬುಧವಾರ ಬಳ್ಳಾರಿಗೆ ಭೇಟಿ ನೀಡಲಿದ್ದು, ಆರ್.ಟಿ.ಇ 2009, ಪೋಕ್ಸೋ 2012, ಬಾಲನ್ಯಾಯ ಕಾಯ್ದೆ-2015 ರ ಅನುಷ್ಠಾನ ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮ ಮತ್ತು ಯೋಜನೆಗಳ ಕುರಿತು ಸಹಭಾಗೀದಾರರ ಇಲಾಖೆಗಳ ಅಧಿಕಾರಿಗಳೊಂದಿಗೆ ಅಂದು ಮಧ್ಯಾಹ್ನ 2.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗಳ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande