ಧಾರವಾಡ, 16 ಜೂನ್ (ಹಿ.ಸ.) :
ಆ್ಯಂಕರ್ : ಧಾರವಾಡ ಶಹರದ ನಾನಾ ಬಡಾವಣೆಗಳ ರಸ್ತೆ ಬದಿ ಹಾಗೂ ನಾನಾ ಕಚೇರಿ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ 03 ಮರಗಳು ಮತ್ತು 93 ಮರದ ಟೊಂಗೆಗಳನ್ನು ತೆರುವುಗೊಳಿಸಲು ಧಾರವಾಡ ವಲಯ ಅರಣ್ಯ ಅಧಿಕಾರಿ ಕಚೇರಿಯಲ್ಲಿ ಜೂನ್ 19, 2025 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು.
ಮರ ಸಂರಕ್ಷಣಾ ಕಾಯ್ದೆ 1976 ರ ಸೆಕ್ಷನ್ 8 (3) ರ ಸೆಕ್ಷನ್ಗಳಲ್ಲಿ ಅಗತ್ಯ ಪಡಿಸಿರುವಂತೆ ಈ ಬಗ್ಗೆ ತಕರಾರು ಸಲ್ಲಿಸ ಬಯಸುವವರು ತಮ್ಮ ತಕರಾರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಧಾರವಾಡ ಉಪ ವಿಭಾಗ, ಧಾರವಾಡ ಹಾಗೂ ಧಾರವಾಡದ ಕೆ.ಸಿ.ಪಾರ್ಕ ಎದುರು ಅರಣ್ಯ ಸಂಕೀರ್ಣದಲ್ಲಿರುವ ಮರ ಅಧಿಕಾರಿಯವರಿಗೆ ಲಿಖಿತ ರೂಪದಲ್ಲಿ ಜೂನ್ 18, 2025 ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa