ಬಳ್ಳಾರಿ, 16 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಗೆ ಸಮೀಪದ ಸಂಗನಕಲ್ಲು ಗ್ರಾಮದ ನಿವಾಸಿ ವಿ. ನಾಗರಾಜ (35) 2024 ರ ಜ.17 ರಂದು ಕಾಣೆಯಾಗಿದ್ದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂದಾಜು 6 ಅಡಿ ಎತ್ತರ, ದುಂಡು ಮುಖ, ಕಪ್ಪುü ಮೈಬಣ್ಣ, ಧೃಡವಾದ ಮೈಕಟ್ಟು ಹೊಂದಿದ್ದು, ಕಪ್ಪು ಕೂದಲು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಟಿ-ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆಯನ್ನು ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, 9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್