ಮಹಿಳಾ ವಿಶ್ವಕಪ್ 2025 : ಅಕ್ಟೋಬರ್ 5ರಂದು ಭಾರತ-ಪಾಕಿಸ್ತಾನ ಪಂದ್ಯ
ನವದೆಹಲಿ, 16 ಜೂನ್ (ಹಿ.ಸ.) : ಆ್ಯಂಕರ್ : ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025ರ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿದ್ದು, ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಅಕ್ಟೋಬರ್ 5 ರಂದು ಶ್ರೀಲಂಕಾದ ಕೊಲಂಬೋದಲ್ಲಿ ನಡೆಯಲಿದೆ. ಪ್ರತಿಷ್ಠಿತ ಟೂರ್ನಮೆಂಟ್ ಸೆಪ್ಟೆಂಬರ್ 30ರಂದು ಬೆಂಗಳೂರಿನ ಎಂ.
Cricket


ನವದೆಹಲಿ, 16 ಜೂನ್ (ಹಿ.ಸ.) :

ಆ್ಯಂಕರ್ : ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025ರ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿದ್ದು, ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಅಕ್ಟೋಬರ್ 5 ರಂದು ಶ್ರೀಲಂಕಾದ ಕೊಲಂಬೋದಲ್ಲಿ ನಡೆಯಲಿದೆ.

ಪ್ರತಿಷ್ಠಿತ ಟೂರ್ನಮೆಂಟ್ ಸೆಪ್ಟೆಂಬರ್ 30ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಆರಂಭಿಕ ಪಂದ್ಯದಿಂದ ಆರಂಭವಾಗಲಿದೆ. ಲೀಗ್ ಹಂತ ಅಕ್ಟೋಬರ್ 26ರವರೆಗೆ ನಡೆಯಲಿದೆ. ಸೆಮಿಫೈನಲ್‌ಗಳು ಅಕ್ಟೋಬರ್ 29 ಮತ್ತು 30ರಂದು ನಡೆಯಲಿದ್ದು, ಫೈನಲ್ ನವೆಂಬರ್ 2ರಂದು ನಿಗದಿಯಾಗಿದೆ.

ಭಾರತ-ಪಾಕಿಸ್ತಾನ ಪಂದ್ಯ ಕೊಲಂಬೋದಲ್ಲಿರುವ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಇತಿಹಾಸದಲ್ಲಿ ಭಾರತ ಮಹಿಳಾ ತಂಡವು ಪಾಕಿಸ್ತಾನ ವಿರುದ್ಧ ನಡೆದ ಎಲ್ಲಾ 11 ಏಕದಿನ ಪಂದ್ಯಗಳಲ್ಲಿ ಜಯಗಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande