ಬೆಂಗಳೂರು, 17 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿಗಳ ಜನಪ್ರಿಯತೆ ಹೆಚ್ಚಿಸಲು ಮತ್ತು ಇಮೇಜ್ ವೃದ್ಧಿಗೆ ಆರ್ಸಿಬಿ ವಿಜಯೋತ್ಸವದ ಕಾರ್ಯಕ್ರಮ ಏರ್ಪಡಿಸಿ 11 ಜನರ ಸಾವಿಗೆ ಕಾರಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡ್ಂ ಪಾರ್ಕ್ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಉಪ ಮುಖ್ಯಮಂತ್ರಿಯವರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾರ್ಯಕ್ರಮ ನಡೆಸಿದ್ದಾರೆ. ಮುಖ್ಯಮಂತ್ರಿ - ಉಪ ಮುಖ್ಯಮಂತ್ರಿಗಳ ನಡುವಿನ ಪೈಪೋಟಿ, ಹುಚ್ಚಾಟದಿಂದ 11 ಜನ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದರು.
ಇಂಥ ಭಂಡ ಸರ್ಕಾರ, ಮುಖ್ಯಮಂತ್ರಿ - ಉಪ ಮುಖ್ಯಮಂತ್ರಿಗಳು ಜನಪ್ರಿಯತೆ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಈ 11 ಜನರು ಸಾಯುವಂತಾಗಿದೆ. ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa