ನವದೆಹಲಿ, 17 ಜೂನ್ (ಹಿ.ಸ.) :
ಆ್ಯಂಕರ್ : ಕೊಚ್ಚಿಯಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ 6E-2706ಗೆ ಮಾರ್ಗ ಮಧ್ಯದಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ, ವಿಮಾನವನ್ನು ನಾಗ್ಪುರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದ್ದು,ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ವಿಮಾನವನ್ನು ತಕ್ಷಣವೇ ಖಾಲಿ ಮಾಡಿಸಲಾಗಿದ್ದು, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ ಶೋಧ ಕಾರ್ಯ ನಡೆಸಿದ್ದು, ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa