ರಾಜ್ಯದಲ್ಲಿ ಜೂನ್ 23ರವರೆಗೆ ಭಾರಿ ಮಳೆ ಎಚ್ಚರಿಕೆ
ಬೆಂಗಳೂರು, 17 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಜೂನ್ 23ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಕೆಂಪು ಎಚ್ಚರಿಕೆ ನೀಡಲಾಗಿದೆ. ಈ
Rain alert


ಬೆಂಗಳೂರು, 17 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಜೂನ್ 23ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಕೆಂಪು ಎಚ್ಚರಿಕೆ ನೀಡಲಾಗಿದೆ. ಈ ಅವಧಿಯಲ್ಲಿ 202 ಮಿ.ಮೀವರೆಗೆ ಮಳೆಯಾಗಲಿದೆ. ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ.

ಅದೇ ರೀತಿ ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಳಿದ ಕಡೆಗಳಲ್ಲಿ ಸಾಧಾರಣ ಮಳೆ ಆಗಬಹುದು. ಬೆಂಗಳೂರಿನಲ್ಲಿ ಮುಂದಿನ ೨ ದಿನ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande