ಕೊಪ್ಪಳ, 17 ಜೂನ್ (ಹಿ.ಸ.) :
ಆ್ಯಂಕರ್ : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಕೊಪ್ಪಳ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಜೂನ್ 20 ಮತ್ತು 21ರಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಆಯುಷ ಅಧಿಕಾರಿ ಡಾ. ಪರ್ವತಗೌಡ ಬ. ಹಿರೇಗೌಡರ ಅವರು ತಿಳಿಸಿದ್ದಾರೆ.
ಜೂನ್ 21 ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2025 ನ್ನು ``ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'' ಎಂಬ ಘೋಷವಾಕ್ಯದೊಂದಿಗೆ ಆಚರಿಸಲು ಆಯುಷ್ ಮಂತ್ರಾಲಯವು ನಿರ್ಧರಿಸಿದ್ದು, ಪ್ರಯುಕ್ತ ಕೊಪ್ಪಳ ಜಿಲ್ಲಾ ಆಯುಷ ಇಲಾಖೆ ವತಿಯಿಂದ ಅಂದು ಬೆಳಿಗ್ಗೆ 6.30 ಗಂಟೆಗೆ ನಗರದ ತಾಲೂಕಾ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಜೂನ್ 20ರ ಸಾಯಂಕಾಲ 4 ಗಂಟೆಯಿಂದ 6 ಗಂಟೆಯವರೆಗೆ ಯೋಗ ಜಾಥಾವನ್ನು ಆಯೋಜಿಸಲಾಗಿದ್ದು, ಯೋಗ ಜಾಥಾವು ಶ್ರೀ ಗವಿಮಠದ ಆವರಣದಿಂದ ಪ್ರಾರಂಭವಾಗಿ ಗಡಿಯಾರ ಕಂಬ, ಅಶೋಕ ಸರ್ಕಲ್ ಮೂಲಕ ತಾಲೂಕಾ ಕ್ರೀಡಾಂಗಣಕ್ಕೆ ಆಗಮಿಸಿ ಮುಕ್ತಾಯವಾಗಲಿದೆ.
ಜೂ. 21ರ ಬೆಳಿಗ್ಗೆ 6.30ಕ್ಕೆ ನಗರದ ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಯೋಗ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು, ಸಿಬ್ಬಂದಿ, ಸರ್ವ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಕೊಪ್ಪಳ ಜಿಲ್ಲಾ ಆಯುಷ್ï ಅಧಿಕಾರಿ ಡಾ. ಪರ್ವತಗೌಡ ಬ. ಹಿರೇಗೌಡರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್