ಬಳ್ಳಾರಿ, 17 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ಚರ್ಚಿಸಲು ಜೂ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಜೂ.27 ರಂದು ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಭೆಗೆ ಸಮುದಾಯದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್