ಗದಗ, 17 ಜೂನ್ (ಹಿ.ಸ.) :
ಆ್ಯಂಕರ್ : ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಗರಸಭೆ ಗದಗ ಬೆಟಗೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನಾ ಸಮಾರಂಭವನ್ನು “ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಜೂನ್ 21 ರಂದು ಬೆಳಿಗ್ಗೆ 6.30 ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ ಗುಂಡೂರಾವ್ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ,ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ,ಪ್ರದೀಪ ಶೆಟ್ಟರ್ , ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ ಅವರುಗಳು ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಆಯುಷ್ ನಿರ್ದೇಶನಾಲಯದ ಆಯುಕ್ತರಾದ ವಿಪಿನ್ ಸಿಂಗ್ ಆಗಮಿಸುವರು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ , ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಯಪಾಲಸಿಂಗ್ ಪಿ ಸಮೋರೆಕರ್ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಸಾಮೂಹಿಕ ಯೋಗ ನಡಿಗೆ : 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 19 ರಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ಮುನ್ಸಿಪಲ್ ಆವರಣದಿಂದ ಸಾಮೂಹಿಕ ಯೋಗ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Lalita MP