ರಾಯಚೂರು, 17 ಜೂನ್ (ಹಿ.ಸ.) :
ಆ್ಯಂಕರ್ : ಜೂನ್ 27ರಂದು ಆಚರಿಸಲ್ಪಡುವ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಯಕ್ಲಾಸಪುರದ ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾ ಭವನದಲ್ಲಿ ಜೂನ್ 24ರ ಬೆಳಗ್ಗೆ 11ಕ್ಕೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಗೆ ಸಮುದಾಯದವರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಆಗಮಿಸಿ ಸಲಹೆ ಸೂಚನೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್