ಸರಕಾರದ ವಿರುದ್ಧ ಆರ್.ಅಶೋಕ ವಾಗ್ದಾಳಿ
ಬೆಂಗಳೂರು, 17 ಜೂನ್ (ಹಿ.ಸ.) : ಆ್ಯಂಕರ್ : ಯುವ ಜನರ ಸಾವಿನ ಶಾಪ ತಟ್ಟಿ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್​ಸಿ
Ashok


ಬೆಂಗಳೂರು, 17 ಜೂನ್ (ಹಿ.ಸ.) :

ಆ್ಯಂಕರ್ : ಯುವ ಜನರ ಸಾವಿನ ಶಾಪ ತಟ್ಟಿ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್​ಸಿಬಿ ಗೆದ್ದದ್ದು ಸಿದ್ದರಾಮಯ್ಯ ಮತ್ತು ತಂಡವೇ ಅಥವಾ ಡಿ.ಕೆ.ಶಿವಕುಮಾರ್ ಮತ್ತವರ ತಂಡವೇ ಎಂಬಂತೆ ವಿಜಯೋತ್ಸವ ಮಾಡಿದ್ದಾರೆ ಎಂದು ಕಿಡಿಕಾರಿದರು.

ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಹೇಳಿದರು.

ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್‌ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಮೃತ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದರು.

ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್‌ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಿದೆ. ಸರ್ಕಾರವೇ ಜನರನ್ನು ವಿಧಾನ ಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande