ಪರಿಸರ ಉಳಿಸಿ, ಭವಿಷ್ಯ ರಕ್ಷಿಸಿ : ಡಿ.ಕೆ.ಶಿವಕುಮಾರ್
ಬೆಂಗಳೂರು, 17 ಜೂನ್ (ಹಿ.ಸ.) : ಆ್ಯಂಕರ್ : ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಬೆಂಗಳೂರಿನಲ್ಲಿ ಪರಿಸರ ನಡಿಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ
Environment day


ಬೆಂಗಳೂರು, 17 ಜೂನ್ (ಹಿ.ಸ.) :

ಆ್ಯಂಕರ್ : ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಬೆಂಗಳೂರಿನಲ್ಲಿ ಪರಿಸರ ನಡಿಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಮಕ್ಕಳು ಹಾಗೂ ಪರಿಸರ ಪ್ರೇಮಿಗಳ ಜೊತೆ ಹೆಜ್ಜೆ ಹಾಕುವ ಮೂಲಕ ಚಾಲನೆ ನೀಡಿದರು.

ಈ ನಡಿಗೆಯ ಉದ್ದೇಶ ಪರಿಸರ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಮಾಲಿನ್ಯ ತಡೆಗೆ ಜನರಲ್ಲಿ ಜಾಗೃತಿ ಮೂಡಿಸುವುದಾಗಿದ್ದು, ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಪ್ರತಿಯೊಬ್ಬರೂ ಈ ಪ್ರಪಂಚವನ್ನು ಹಸಿರಾಗಿಸಲು ತಮ್ಮ ಪಾತ್ರವನ್ನು ನಿರ್ವಹಿಸೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande