ಥಗ್ ಲೈಫ್' ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಅನುಮತಿ
ಕರ್ನಾಟಕ ಸರ್ಕಾರಕ್ಕೆ ಪೊಲೀಸ್ ಭದ್ರತೆ ಒದಗಿಸಲು ಸೂಚನೆ
Thuglife


ನವದೆಹಲಿ, 17 ಜೂನ್ (ಹಿ.ಸ.) :

ಆ್ಯಂಕರ್ : ನಟ ಕಮಲ್ ಹಾಸನ್ ಕನ್ನಡ ಭಾಷೆ ಬಗ್ಗೆ ನೀಡಿದ ಹೇಳಿಕೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಿಷೇಧಿಸಿದ್ದ 'ಥಗ್ ಲೈಫ್' ಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದೆ.

ಗುಂಡಾ ಗುಂಪುಗಳು ಯಾವ ಚಿತ್ರ ಪ್ರದರ್ಶಿಸಬೇಕು ಎಂಬುದನ್ನು ನಿರ್ಧರಿಸಬಹುದಾದ ಹಕ್ಕು ಅವರಿಗೆ ಇಲ್ಲ ಎಂದು ಕಠಿಣವಾಗಿ ಎಚ್ಚರಿಸಿದ ನ್ಯಾಯಾಲಯ, ಮೂಲಭೂತ ಹಕ್ಕುಗಳ ರಕ್ಷಣೆ ಅಗತ್ಯ ಎಂದಿದೆ.

‘ಭಿನ್ನ ಅಭಿಪ್ರಾಯ ಇರುವುದು ಸಹಜ. ಆದರೆ ಬೆದರಿಕೆ, ನಿಷೇಧ ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧ’ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಹೈಕೋರ್ಟ್ ನಿರ್ದೇಶನಗಳನ್ನೂ ಟೀಕಿಸಿದ ಸುಪ್ರೀಂಕೋರ್ಟ್, 'ಕ್ಷಮೆ ಕೇಳು' ಎಂದು ಹೇಳುವುದು ನ್ಯಾಯಾಲಯದ ಕೆಲಸವಲ್ಲ ಎಂದಿದೆ.

ಈ ಆದೇಶದ ಪರಿಣಾಮವಾಗಿ ಕರ್ನಾಟಕದಲ್ಲಿ 'ಥಗ್ ಲೈಫ್' ಬಿಡುಗಡೆಯಾಗಲಿದೆ. ಚಿತ್ರಮಂದಿರಗಳಿಗೆ ಪೊಲೀಸ್ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande