ರಾಯಚೂರು, 18 ಜೂನ್ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಅಭಿವೃದ್ದಿ ಮಂತ್ರಾಲಯ ಭಾರತ ಸರ್ಕಾರದ ವತಿಯಿಂದ 2025ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಯಚೂರು ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಸಂಸ್ಕøತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರುವ ಸಾಧನೆ ಮಾಡಿರುವ ಎಲ್ಲಾ ಮಕ್ಕಳು ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ-2025ಕ್ಕೆ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿಯನ್ನು ಜುಲೈ 31ರೊಳಗೆ ಆನ್‍ಲೈನ್ (https://awards.gov.in) ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್