ಬೆಂಗಳೂರು, 18 ಜೂನ್ (ಹಿ.ಸ.) :
ಆ್ಯಂಕರ್ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಆದಷ್ಟು ಬೇಗ ನಡೆಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು ಚುನಾವಣೆ ನಡೆಸುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ, ಪ್ರತಿಪಕ್ಷಗಳ ನಾಯಕರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ, ಆವರೊಂದಿಗೆ ಮತ್ತೊಮ್ಮೆ ಚರ್ಚೆ ಮಾಡಬೇಕಿದೆ, ಪ್ರತಿಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾವುದನ್ನೂ ಮಾಡುವುದಿಲ್ಲ, ಚುನಾವಣೆಗೆ ಸೂಕ್ತ ಸಮಯ ಯಾವುದು ಎಂದು ನಿರ್ಧರಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa