ವಿಕಲಚೇತನರ ಇಲಾಖೆ : ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ, 18 ಜೂನ್ (ಹಿ.ಸ.) : ಆ್ಯಂಕರ್ : 2025ನೇ ಸಾಲಿಗೆ ಕೇಂದ್ರ ಸರ್ಕಾರವು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಸಬಲೀ
ವಿಕಲಚೇತನರ ಇಲಾಖೆ : ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ


ಕೊಪ್ಪಳ, 18 ಜೂನ್ (ಹಿ.ಸ.) :

ಆ್ಯಂಕರ್ : 2025ನೇ ಸಾಲಿಗೆ ಕೇಂದ್ರ ಸರ್ಕಾರವು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಜುಲೈ 15 ರೊಳಗಾಗಿ ಭಾರತ ಸರ್ಕಾರದ ಜಾಲತಾಣ: www.awards.gov.in ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬೇಕು.

ಅರ್ಹತಾ ಮಾನದಂಡಗಳು ಹಾಗೂ ಇತರ ವಿವರಗಳಿಗಾಗಿ ಇಲಾಖೆಯ ವೆಬ್‍ಸೈಟ್: www.depwd.gov.in ಗೆ ಭೇಟಿ ನೀಡಬಹುದು. ಅಥವಾ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರದ ದೂ.ಸಂ. 08539-295496 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande