ಧಾರವಾಡ, 18 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರ, ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಿವೆ. ಈ ಯೋಜನೆಗಳನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸುವುದು ಇಲಾಖೆಗಳ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿ ಫಲಾನುಭವಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯೋಜನೆಗಳ ಯಶಸ್ಸು ಅವಲಂಬಿತವಾಗಿರುವುದು ಅಧಿಕಾರಿಗಳ ನಿಷ್ಠೆಯ ಮೇಲೆ, ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa