ನಿಪ್ಪಾಣಿ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ನಿಧನ
ನಿಪ್ಪಾಣಿ, 18 ಜೂನ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಹಾಗೂ ರಾಜ್ಯ ರಾಜಕೀಯದ ಹಿರಿಯ ನಾಯಕ ಕಾಕಾ ಸಾಹೇಬ್ ಪಾಟೀಲ್ (70) ಬೆಳಗಾವಿಯ ಕೆ ಎಲ್‌ ಇ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತ
Patil


ನಿಪ್ಪಾಣಿ, 18 ಜೂನ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಹಾಗೂ ರಾಜ್ಯ ರಾಜಕೀಯದ ಹಿರಿಯ ನಾಯಕ ಕಾಕಾ ಸಾಹೇಬ್ ಪಾಟೀಲ್ (70) ಬೆಳಗಾವಿಯ ಕೆ ಎಲ್‌ ಇ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಡರಾತ್ರಿ ರಾತ್ರಿ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.

ಕಾಕಾ ಸಾಹೇಬ್ ಪಾಟೀಲ್ ಅವರ ನಿಧನದ ಸುದ್ದಿ ತಿಳಿದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಘಾತ ವ್ಯಕ್ತಪಡಿಸಿದ್ದು, ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande