ಬಳ್ಳಾರಿ, 18 ಜೂನ್ (ಹಿ.ಸ.) :
ಆ್ಯಂಕರ್ : ಕೇಂದ್ರ ಆಯುಷ್ ಮಂತ್ರಾಲಯ, ರಾಷ್ಟ್ರೀಯ ಆಯುಷ್ ಅಭಿಯಾನ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಜಿಲ್ಲೆಯ ನಾನಾ ಯೋಗ ಸಂಘ-ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿ ಜೂ.21 ರಂದು ಬೆಳಿಗ್ಗೆ 06 ಗಂಟೆಗೆ ನಗರದ ಕಪ್ಪಗಲ್ಲು ರಸ್ತೆಯ ಶೆಟ್ರ ಗುರುಶಾಂತಪ್ಪ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 11ನೇ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಯುಷ್ ಸೇವೆಗಳ ಸಚಿವ ದಿನೇಶ್ ಗುಂಡೂರಾವ್ ಅವರು ಘನ ಉಪಸ್ಥತಿ ಇರುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಆಯುಷ್ ಇಲಾಖೆಯ ಆಯುಕ್ತ ವಿಪಿನ್ ಸಿಂಗ್, ಆಯುಷ್ ಇಲಾಖೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಉಪನಿರ್ದೇಶಕ ಡಾ.ಹರೀಶ್ ಬಾಬು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ, ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಣೇಕಲ್ ಮಹಾಂತೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷ ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಯೋಗ ಸಂಸ್ಥೆಗಳ ಪದಾಧಿಕಾರಿಗಳು, ಆಯುಷ್ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇತರರು ಉಪಸ್ಥಿತರಿರುವರು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್