ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ‌ ಜೊತೆಗೆ ಊಟ ಮಾಡಿದ ಅಧಿಕಾರಿ
ಗದಗ, 18 ಜೂನ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಲೆಗಳಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಭೇಟಿ ನೀಡಿದರು. ಶಾಲೆಯೊಂದರಲ್ಲಿ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು. ಛಬ್ಬಿ ಸರ್ಕಾರಿ ಹಿರಿಯ
ಪೋಟೋ


ಪೋಟೋ


ಗದಗ, 18 ಜೂನ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಲೆಗಳಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಭೇಟಿ ನೀಡಿದರು. ಶಾಲೆಯೊಂದರಲ್ಲಿ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು.

ಛಬ್ಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು ಶಾಲಾ ಮಕ್ಕಳ ಜೊತೆಗೆ ಊಟ ಮಾಡಿದರು. ಇದೇ ವೇಳೆ ಆಹಾರದ ಗುಣಮಟ್ಟ, . ಆಹಾರ ದಾನ್ಯಗಳ ಗುಣಮಟ್ಟ, ಬಿಸಿ ಊಟದ ಕೊಠಡಿ, ಎಸ್ ಡಿ ಎಮ್ ಸಿ ಖಾತೆಗಳ ವಿವರ ಇತ್ಯಾದಿ ಪರಿಶೀಲನೆ ನಡೆಸಿದರು ನಂತರ ಮಕ್ಕಳೊಂದಿಗೆ ಕೆಲಕಾಲ ಕಳೆದರು.

ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಶಾಲಾ ಶಿಕ್ಷಕರು ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande