ಬಳ್ಳಾರಿ, 18 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿಯ ಬಿಸಿಲಹಳ್ಳಿ ಮುಸ್ ನಿಂದ ವಿದ್ಯುತ್ ಸರಬರಾಜು ಆಗುವ ಎಫ್-63 ಮತ್ತು ಎಫ್-64 ನ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುರಿಂದ ಜೂ.20 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ರೂಪನಗುಡಿ, ಗ್ರಾಂಡ್ ಫಂಕ್ಷನ್ ಹಾಲ್, ವೆಂಕಟರಮಣ ನಗರ, ನಬೀ ಕಾಲೋನಿ, ಅಂಜಿನಪ್ಪ ನಗರ, ಶ್ರೀರಾಂಪುರ ಕಾಲೋನಿ, ಗೋನಾಳ್, ವರಬಸಪ್ಪ ಗುಡಿ ಹಾಗೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದರು,
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್