ರಾಜೀವ್‍ ಗಾಂಧಿ ಆರೋಗ್ಯ ವಿವಿ ಕೋರ್ಸಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ರಾಯಚೂರು, 18 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ “ಶುಲ್ಕ ಮರುಪಾವತಿ” ಯೋಜನೆಯ ಸೌಲಭ್ಯವನ್ನು ಆನ್‍ಲೈನ್ ಮೂಲಕ ನೀಡಲಾಗುತ್ತಿದೆ. ಈ ಯೋಜನೆಯ ಅರ್
ರಾಜೀವ್‍ ಗಾಂಧಿ ಆರೋಗ್ಯ ವಿವಿ ಕೋರ್ಸಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ರಾಯಚೂರು, 18 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ “ಶುಲ್ಕ ಮರುಪಾವತಿ” ಯೋಜನೆಯ ಸೌಲಭ್ಯವನ್ನು ಆನ್‍ಲೈನ್ ಮೂಲಕ ನೀಡಲಾಗುತ್ತಿದೆ. ಈ ಯೋಜನೆಯ ಅರ್ಜಿ ಸಲ್ಲಿಸಲು ಮೊದಲು ನಿಗದಿಯಾದ ಕೊನೆಯ ದಿನಾಂಕ ಜೂನ್ 15 ಆಗಿದ್ದು, ವಿದ್ಯಾರ್ಥಿಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳ ಮನವಿ ಪರಿಗಣಿಸಿ ಹಾಗೂ ಮಾನ್ಯ ಹೈಕೋರ್ಟ್ ನೀಡಿರುವ ಮಧ್ಯೆಂತರ ಆದೇಶದನ್ವಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕೋರ್ಸ್‍ಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಅಧಿಕೃತ ವೆಬ್‍ಸೈಟ್ https://ssp.postmatric.karnataka.gov.in ಮುಖಾಂತರ ಆನ್‍ಲೈನ್ ಮೂಲಕ ಸಲ್ಲಿಸಬೇಕಾಗಿದೆ. ಈ ಯೋಜನೆಯ ವಿವರಗಳು, ಅರ್ಹತೆ ಮಾನದಂಡ, ಅಗತ್ಯ ದಾಖಲೆಗಳು ಹಾಗೂ ಸಂಬಂಧಿತ ಸರ್ಕಾರಿ ಆದೇಶಗಳಿಗಾಗಿ ಇಲಾಖೆಯ ಅಧಿಕೃತ ವೆಬ್‍ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು.

ಈ ಯೋಜನೆಗೆ ಸಂಬಂಧಿಸಿದ ಯಾವುದೇ ಸಹಾಯಕ್ಕಾಗಿ ವಿದ್ಯಾರ್ಥಿಗಳು 8050770005 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಅಥವಾ bcwdhelpline@gmail.com ಗೆ ಇಮೇಲ್ ಕಳುಹಿಸಬಹುದು. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಸಹಾಯವಾಣಿಯ ಇಮೇಲ್ postmatrichelp@karnataka.gov.in ಆಗಿದ್ದು, ಸಹಾಯವಾಣಿ ದೂರವಾಣಿ ಸಂಖ್ಯೆ 1902 ರಲ್ಲಿ ಸಹ ಸೇವೆ ಲಭ್ಯವಿದೆ.

ವಿದ್ಯಾರ್ಥಿಗಳು ಈ ಅವಕಾಶವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಲು ಹಾಗೂ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande