ವಿದ್ಯುತ್ ಪ್ರಸರಣ ಇಲಾಖೆ ಖಾಲಿ ಹುದ್ದೆ ಭರ್ತಿಗೆ ಕ್ರಮ : ಮುಖ್ಯಮಂತ್ರಿ
ಬೆಂಗಳೂರು, 18 ಜೂನ್ (ಹಿ.ಸ.) : ಆ್ಯಂಕರ್ : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ
Cm


ಬೆಂಗಳೂರು, 18 ಜೂನ್ (ಹಿ.ಸ.) :

ಆ್ಯಂಕರ್ : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ಶ್ಲಾಘಿಸಿದರು.

ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲೀವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ನಾವು 34000 ಮೆಘಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ಕೇವಲ ನಮ್ಮ ರಾಜ್ಯದ್ದಾಗಿದೆ ಎಂದರು.

ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಿ ಎಂದು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande