11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2025
ಕೊಪ್ಪಳ , 19 ಜೂನ್ (ಹಿ.ಸ.) ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಕೊಪ್ಪಳ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳು ಮತ್ತು ಸರ್ವಯೋಗ ಸಂಸ್ಥೆಗಳು ಇವರ ಸಹಯೋಗದಲ್ಲಿ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ಜೂನ್ 21 ರಂದು ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧೈಯವಾಕ್ಯದೊಂದಿಗ
11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2025


ಕೊಪ್ಪಳ , 19 ಜೂನ್ (ಹಿ.ಸ.)

ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಕೊಪ್ಪಳ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳು ಮತ್ತು ಸರ್ವಯೋಗ ಸಂಸ್ಥೆಗಳು ಇವರ ಸಹಯೋಗದಲ್ಲಿ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ಜೂನ್ 21 ರಂದು ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧೈಯವಾಕ್ಯದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು.

ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬೀಸಾಬ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ ಅವರು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನ್ ರಾಜ್, ಬೆಂಗಳೂರು ಆಯುಷ್ ನಿರ್ದೇಶನಾಲಯದ ಆಯುಕ್ತರಾದ ವಿಪಿನ್ ಸಿಂಗ್, ಬೆಂಗಳೂರು ಆಯುಷ್ (ಯೋಗ ಮತ್ತು ಪ್ರಕೃತಿ ಚಿಕಿತ್ಸೆ) ಇಲಾಖೆಯ ಉಪನಿರ್ದೇಶಕರಾದ ಡಾ. ಹರೀಶ್ ಬಾಬು ಅವರು ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಅನುಷ್ಠಾನಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಅವರು ಉಪಸ್ಥಿತರಿರುವರು ಎಂದು ಕೊಪ್ಪಳ ಜಿಲ್ಲಾ ಆಯುಷ್ ,ಅಧಿಕಾರಿ ಡಾ.ಪರ್ವತಗೌಡ ಬ. ಹಿರೇಗೌಡರ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande