ಬೆಂಗಳೂರು, 19 ಜೂನ್ (ಹಿ.ಸ.):
ಆ್ಯಂಕರ್:
ಜಲಸಂಪನ್ಮೂಲ ಇಲಾಖೆಯಡಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಆರ್ಯಭೋಗಪುರ ಗ್ರಾಮದ ಬಳಿ ಮಸ್ಕಿನಾಲಾದಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸಲು ಮಸ್ಕಿನಾಲೆಯ ಮೇಲ್ಭಾಗದಲ್ಲಿ ಬ್ರಿಡ್ಜ್ –ಕಂ ಬ್ಯಾರೇಜ್ ನಿರ್ಮಿಸಲು ಮತ್ತು ಕನಕನಾಲಾ ಆಧುನೀಕರಣ ಯೋಜನೆಯ 134.56 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಹಿನ್ನೀರಿನ ಮೇಲ್ಭಾಗದಲ್ಲಿರುವ ಬಾಧಿತ ಅಚ್ಚುಕಟ್ಟು ಪ್ರದೇಶಗಳಾದ ಆರ್ಯಭೋಗಾಪುರ, ಮುದಲಗುಂಡಿ, ವನರಳ್ಳಿ, ಕಿಲನೂರು, ಕಲ್ಮಳ್ಳಿ, ಅಮರಾಪುರ ತಾಂಡಾಗಳು ಕಿಲ್ಲರಹಟ್ಟಿ ಗ್ರಾಮಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa