ಕೊಪ್ಪಳ, 19 ಜೂನ್ (ಹಿ.ಸ.)
ಆ್ಯಂಕರ್: 2025-26ನೇ ಸಾಲಿಗೆ ಅಖಿಲ ಭಾರತ ಮಟ್ಟದಲ್ಲಿ ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 23 ರವರೆಗೆ ವಿಸ್ತರಿಸಲಾಗಿದೆ.
ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಅನುದಾನ ರಹಿತ ಕೋರ್ಸುಗಳಾದ ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪೇರ್ಡ್), ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ ಕೋರ್ಸುಗಳು ಲಭ್ಯವಿದ್ದು, ಅರ್ಜಿ ಸಲ್ಲಿಸಬಹುದು.
ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಹಾಗೂ ಶೇ.40 ಮತ್ತು ಮೇಲ್ಪಟ್ಟು ಮೂಳೆ ಮತ್ತು ಕೀಲು ಅಂಗವಿಕಲತೆ, ಶೇ.60 ಡಿಬಿ ಮತ್ತು ಮೇಲ್ಪಟ್ಟು ಕಿವುಡು ಮತ್ತು ಮೂಗು ಅಂಗವಿಕಲತೆ ಮತ್ತು ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪೇರ್ಡ್) ಕೋರ್ಸಿಗೆ 6/60 ಅಥವಾ 20/200 ಸ್ನೆಲೆನ್ ಅಂಧತ್ವ ಹೊಂದಿದ ಅರ್ಹ ಅಭ್ಯರ್ಥಿಗಳು ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯವಿರುತ್ತದೆ.
ಅರ್ಜಿಯನ್ನು ಸಲ್ಲಿಸಲು ಜೂನ್ 23 ಕೊನೆಯ ದಿನವಾಗಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು-570006 ವಿಳಾಸದಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100/- ಹಾಗೂ ಎಸ್ಸಿ/ಎಸ್ಟಿ/ಪ್ರ-1 ವರ್ಗದವರಿಗೆ ರೂ. 50/- ರ ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್ಸೈಟ್ www.jsspda.org ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್, ಇ-ಮೇಲ್ ï jsspda@gmail.com ಅಥವಾ ಮೊ.ಸಂ. 9844644937 ಗೆ ಸಂಪರ್ಕಿಸಬಹುದು ಎಂದು ಕಚೇರಿ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್